ಸೇತುವೆಯಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

A person fell down from the bridge and died

18-04-2018

ಬೆಂಗಳೂರು: ಮಾನಸಿಕ ಅಸ್ವಸ್ಥನೊಬ್ಬ ಸೇತುವೆಯಿಂದ ಕೆಳಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ನಿನ್ನೆ ರಾತ್ರಿ ಸುದ್ದಗುಂಟೆಪಾಳ್ಯದ ಡೇರಿ ವೃತ್ತದಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯದ ಲಕ್ಷ್ಮಿನಾರಾಯಣ (35)ಎಂದು ಆತ್ಮಹತ್ಯೆ ಮಾಡಿಕೊಂಡಿವರನ್ನು ಗುರುತಿಸಲಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು, ಮನೆಗೆ ಸರಿಯಾಗಿ ಹೋಗದೆ ರಸ್ತೆ ಬದಿಯಲ್ಲೇ ಕಾಲ ಕಳೆಯುತ್ತಿದ್ದರು. ಡೇರಿ ವೃತ್ತದ ಬಳಿ ಓಡಾಡುತ್ತಿರುತಿದ್ದ ಲಕ್ಷ್ಮಿನಾರಾಯಣ ರಾತ್ರಿ 10.30ರ ವೇಳೆ ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಸುದ್ದಗುಂಟೆಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

flyover Mental illness ಅಸ್ವಸ್ಥ ಆತ್ಮಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ