ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟು ಹಬ್ಬದ ಪ್ರಯುಕ್ತ ಪೂಜೆ ಸಲ್ಲಿಸಿದ ಜೆಡಿಎಸ್ ಮುಖಂಡರು

Kannada News

18-05-2017

ಹಾಸನ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟು ಹಬ್ಬದ ಅಂಗವಾಗಿ  ನಗರದ ಶ್ರೀ ಆಂಜನೇಯ ಸ್ವಾಮಿ ದೇವಾಲಯ ದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯ ಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಅಂಧ ರಾಮಯ್ಯ ಪಾಲ್ಗೂಂಡು ಗೌಡರ ಮೇಲಿನ ಅಭಿಮಾನವನ್ನು  ಮೆರೆದರು.. ನಂತರ ಆಜಾದ್ ರಸ್ತೆಯಲ್ಲಿರುವ ಈದ್ಗ ಮೈದಾನಕ್ಕೆ ತೆರಳಿ ಮುಸ್ಲಿಂ ಬಾಂಧವರೊಂದಿಗೆ ಪ್ರಾರ್ಥನೆ ಸಲ್ಲಿಸಿದರು‌‌.ಬಾಲ ಭವನದಲ್ಲಿ ಮಕ್ಕಳಿಗೆ ಹಣ್ಣು ವಿತರಿಸಲಾಯಿತು. ಶಾಸಕ ಹೆಚ್‌ಎಸ್.ಪ್ರಕಾಶ್, ಮಾಜಿ ಎಂ‌.ಎಲ್.ಸಿ.ಪಟೇಲ್ ಶಿವರಾಂ,ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್, ಕೆ.ಎಂ.ರಾಜೇಗೌಡ, ನಗರಸಭೆ ಅಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರಿದ್ದರು .

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ