ಚಾಮುಂಡೇಶ್ವರಿಯಲ್ಲಿ ಸಿಎಂ ಬಿರುಸಿನ ಪ್ರಚಾರ

siddaramaiah election campaign at chamundeshwari

18-04-2018

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮೈಸೂರಿನಲ್ಲಿ ಬೆಳಿಗ್ಗೆ ಬಸವೇಶ್ವರರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕ ಪ್ರತಿನಿಧಿಗಳ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಟ್ಟಿ ಹುಂಡಿಯಿಂದ ಪ್ರಚಾರ ಆರಂಭಿಸಿದರು. ಗೋಹಳ್ಳಿ, ಕುಮಾರಬೀಡು, ಬೀರಿ ಹುಂಡಿ, ಶೆಟ್ಟ ನಾಯ್ಕನಹಳ್ಳಿ, ಮಾದಹಳ್ಳಿಯಲ್ಲಿ ಮುಖ್ಯಮಂತ್ರಿ ಪ್ರಚಾರ ನಡೆಸಿದರು. ಬೀರಿಹುಂಡಿಗೆ ಆಗಮಿಸಿದ ಮುಖ್ಯಮಂತ್ರಿಯವರನ್ನು ಗ್ರಾಮಸ್ಥರು ಪೂರ್ಣಕುಂಭಗಳೊಂದಿಗೆ ಬರ ಮಾಡಿಕೊಂಡರು. ಲೋಕೋಪಯೋಗಿ ಸಚಿವ ಡಾ.ಮಹದೇವಪ್ಪ, ಮಾಜಿ ಶಾಸಕ ಸತ್ಯನಾರಾಯಣ ಅವರು ಪ್ರಚಾರದಲ್ಲಿ ಭಾಗಿಯಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ