ಗದಗ ಬಿಜೆಪಿಯಲ್ಲಿ ತೀವ್ರಗೊಂಡ ಭಿನ್ನಮತ

sri shailapa outrage in gadag BJP

19-04-2018

ಗದಗ: ಜಿಲ್ಲೆಯ ಬಿಜೆಪಿಯಲ್ಲಿ ಭಿನ್ನಮತ ತೀವ್ರಗೊಂಡಿದೆ. ಗದಗ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ಮಾಜಿ ಶಾಸಕ ಶ್ರೀಶೈಲಪ್ಪ ಬಂಡಾಯವೇಳುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ. ಗದಗ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ಶ್ರೀಶೈಲಪ್ಪ ಬಿದರೂರ, ರೋಣ ಕ್ಷೇತ್ರದಿಂದ ಸ್ಪರ್ಧಿಸುವ ಮುನ್ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಶ್ರೀಶೈಲಪ್ಪ ಬಿದರೂರ ಅಳಿಯ ಉದಯ ದೇಸಾಯಿ ಫೇಸ್‌ಬುಕ್‌ ನಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದ ಶಿವಕುಮಾರ್ ಉದಾಸಿ, ಸಿ ಎಂ ಉದಾಸಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಸಿ ಪಾಟೀಲ್, ಮಾಜಿ ಸಚಿವ ಕಳಕಪ್ಪ ಬಂಡಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಬೆನ್ನಿಗೆ ಚೂರಿ ಹಾಕುವವರು ಎಂದು ಕಿಡಿಕಾರಿದ್ದಾರೆ.

ನರಗುಂದ ತಾಲ್ಲೂಕಿನ ಗೌಡರ ಘರ್ಜನೆಗೆ ಬಾಲ ಮುದುರಿದ ಬೆಳಗಾವಿ ಇಲಿ ಅಂತ ಪರೋಕ್ಷವಾಗಿ ಸಿ.ಸಿ ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಗದಗ ಜಿಲ್ಲೆಯಲ್ಲಿ ಈ ಬಾರಿ ಶ್ರೀಶೈಲಪ್ಪ ಬಿದರೂರ ಬೆಂಬಲಿತ ಅಭ್ಯರ್ಥಿಗಳು ನಿರ್ಣಾಯಕರು ಅಂತ ಫೇಸ್‌ಬುಕ್‌ ನಲ್ಲಿ ಪೋಸ್ಟ್ ಮಾಡಲಾಗಿದೆ. ಶೀಘ್ರದಲ್ಲೇ ರೋಣ ಕ್ಷೇತ್ರದ ಬೆಂಬಲಿಗರ, ಅಭಿಮಾನಿಗಳ, ಹಿತೈಷಿಗಳ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bidaruru srishailapp MLA ಬಂಡಾಯ ಜಿಲ್ಲಾಧ್ಯಕ್ಷ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ