ಜೆಡಿಎಸ್ ಸೇರಿದ ಚಿತ್ರ ನಟ ಶಶಿಕುಮಾರ್

Actor shashi kumar joined JDS

19-04-2018

ಬೆಂಗಳೂರು: ಮಾಜಿ ಸಂಸದ ಹಾಗೂ ಹೆಸರಾಂತ ಚಿತ್ರನಟ ಶಶಿಕುಮಾರ್ ಜಾತ್ಯತೀತ ಜನತಾ ದಳಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನಿವಾಸದಲ್ಲಿ ಶಶಿಕುಮಾರ್ ಜೆಡಿಎಸ್ ಗೆ ಸೇರ್ಪಡೆಗೊಂಡರು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶಶಿಕುಮಾರ್, ಕಾಂಗ್ರೆಸ್ ನಿಂದ ಸ್ಪರ್ಧೆಗೆ ಅವಕಾಶ ದೊರೆಯದೇ ಕಾಂಗ್ರೆಸ್ ಪಕ್ಷ ತೊರೆದು ಜಾತ್ಯತೀತ ಜನತಾದಳ ಪಕ್ಷ ಸೇರಿದ್ದಾರೆ. ಈ ಹಿಂದೆ ಶಶಿಕುಮಾರ್, ಕಾಂಗ್ರೆಸ್ ಪಕ್ಷದಿಂದ  ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾಯಿತರಾಗಿದ್ದರು. ಈ ಬಾರಿ ಶಶಿಕುಮಾರ್ ಹೊಸದುರ್ಗ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧಿಸುವರು ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

H.D Deve gowda Shashikumar ಹೊಸದುರ್ಗ ಸಂಸದ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ