ಭೀಕರ ಅಪಘಾತ ಮೂವರ ದುರ್ಮರಣ

Accident between ksrtc and car: 3 people died

19-04-2018

ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದೆ. ರೂಪ (35), ಕಿಶನ್(10),  ಮತ್ತೊಬ್ಬರ ಹೆಸರು ತಿಳಿದು ಬಂದಿಲ್ಲ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಾಗಳಾಗಿದ್ದು ಜಿಲ್ಲಾಸ್ಪತ್ರೆ ದಾಖಲಿಸಲಾಗಿದೆ. ಚಿಕ್ಕಮಗಳೂರಿನಿಂದ ಕಡೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.


ಸಂಬಂಧಿತ ಟ್ಯಾಗ್ಗಳು

KSRTC Accident ಗಂಭೀರ ಮುಖಾಮುಖಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ