ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವನ ಬಂಧನ

betting : one arrested

19-04-2018

ಬೆಂಗಳೂರು: ಯಶವಂತಪುರದ ಇಂಡಸ್ಟ್ರಿಯಲ್ ಪ್ರದೇಶದಲ್ಲಿನ ಡಿಟಿಡಿಸಿ ಕೋರಿಯರ್ ಕಛೇರಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಾದನಾಯಕನಹಳ್ಳಿಯ ಲಕ್ಷ್ಮಿಪುರದ ಸೋಮಶೇಖರ(35) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 59 ಸಾವಿರ ನಗದು, ಎರಡು ಮೊಬೈಲ್‍ಗಳು, ಬೆಟ್ಟಿಂಗ್ ವಿವರ ಬರೆದಿರುವ ಪಾಕೆಟ್ ಡೈರಿಯನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಬಂಧಿಸಿದ್ದಾರೆ. ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

betting extortions ಸಾರ್ವಜನಿಕ ದಂಧೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ