ಬಂಡಾಯ ಶಮನಕ್ಕೆ ರಾಹುಲ್ ಗಾಂಧಿ ಯತ್ನ

Rahul Gandhi

20-04-2018

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಟಿಕೆಟ್ ಘೋಷಿಸಿದ ನಂತರ ಪಕ್ಷದಲ್ಲಿ ಉದ್ಭವಿಸಿರುವ ಬಂಡಾಯ ಶಮನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದಾಗಿದ್ದಾರೆ. ಟಿಕೆಟ್ ವಂಚಿತರನ್ನು ಕರೆದು ಮಾತಾಡಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಟಿಕೆಟ್ ವಂಚಿತರು ಅನ್ಯ ಪಕ್ಷದ ಬಾಗಿಲು ತಟ್ಟುತ್ತಿರುವುದು ದೊಡ್ಡ ತಲೆನೋವಾಗಿದೆ.

ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದರೆ ಚುನಾವಣೆ ವೇಳೆ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪುಲಕೇಶಿನಗರದ ಟಿಕೆಟ್ ವಂಚಿತ ಪ್ರಸನ್ನಕುಮಾರ್ ಹಾಗೂ ಜಗಳೂರಿನ ಎ.ಎಲ್.ಪುಷ್ಪಾ ಸೇರಿ ಇತರರನ್ನು ದೆಹಲಿಗೆ ರಾಹುಲ್ ಗಾಂಧಿ ಕರೆಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rahul gandhi K.C.Venugopal ವಿಧಾನಸಭೆ ಎಐಸಿಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ