ಉದ್ಯೋಗಕ್ಕಾಗಿ ಬಂದಿದ್ದ ಯುವತಿ ಮೇಲೆ ಅತ್ಯಾಚಾರ

A bombay girl raped in bengaluru

20-04-2018

ಬೆಂಗಳೂರು: ಉದ್ಯೋಗ ಹಡುಕಿಕೊಂಡು ಮುಂಬೈನಿಂದ ನಗರಕ್ಕೆ ಬಂದಿದ್ದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯವೆಸಗಿದ ಆರೋಪಿಯನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಇಂಜುಮಾಮ್ ಉಲ್ ಹಕ್ ಬಂಧಿತ ಆರೋಪಿಯಾಗಿದ್ದಾನೆ, ಕಳೆದ ಕೆಲ ತಿಂಗಳ ಹಿಂದೆ ನಗರಕ್ಕೆ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿಯು ವಿವಾಹವಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ ನಡೆಸಿದ್ದಾನೆ.

ಗರ್ಭಿಣಿಯಾದ ಯುವತಿಯು ಶೀಘ್ರದಲ್ಲಿಯೇ ಮದುವೆಯಾಗುವಂತೆ ಒತ್ತಾಯಿಸಿದಾಗ ಆರೋಪಿ ಮದುವೆಗೆ ನಿರಾಕರಿಸಿದ್ದಾನೆ. ಇದರಿಂದ ನೊಂದ ಆಕೆ ಆರೋಪಿಯ ಪೋಷಕರಿಗೆ ವಿಷಯ ತಿಳಿಸಿ ನ್ಯಾಯ ಕೇಳಿದರೂ ಅವರೂ ಸಹ ಬೆದರಿಕೆ ಹಾಕಿ ಕಳುಹಿಸಿದ್ದಾರೆ. ಮನೆಯವರಿಗೆ ವಿಷಯ ತಿಳಿಸಿದ್ದಾಳೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ಆರೋಪಿಯು ಯುವತಿಯ ಮೇಲೆ ಮನಸ್ಸಿಗೆ ಬಂದಂತೆ ಹಲ್ಲೆ ನಡೆಸಿ ಸಿಗರೇಟ್‍ನಲ್ಲಿ ಸುಟ್ಟು ಕಿರುಕುಳ ನೀಡಿದ್ದಾನೆ.

ನೊಂದ ಯುವತಿ ಆರೋಪಿ ಹಾಗೂ ಅವನ ಪೋಷಕರ ವಿರುದ್ಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು  ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Harassment Rape ಬೆದರಿಕೆ ವಿವಾಹ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ