ಸಚಿವ ವಿನಯ್ ಕುಲಕರ್ಣಿ ನಾಮಪತ್ರ ಸಲ್ಲಿಕೆ

20-04-2018
ಧಾರವಾಡ: ಸಚಿವ ವಿನಯ್ ಕುಲಕರ್ಣಿ ಧಾರವಾಡದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಪತ್ನಿ ಹಾಗೂ ಇಬ್ಬರು ಬೆಂಬಲಿಗರ ಜೊತೆಗೆ ಬಂದು ನಾಮಪತ್ರ ಸಲ್ಲಿಸಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ ಕುಲಕರ್ಣಿ, ಎರಡು ಬಾರಿ ಇದೇ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮೂರನೇ ಬಾರಿಗೆ ಆಯ್ಕೆ ಬಯಸಿ ಅದೇ ಕ್ಷೇತ್ರದಲ್ಲೇ ಸ್ಪರ್ಧಿಸುತ್ತಿದ್ದಾರೆ ಕುಲಕರ್ಣಿ. ಚುನಾವಣಾಧಿಕಾರಿ ಪಿ.ಜಯಮಾಧ ಅವರಿಗೆ ನಾಮಪತ್ರ ಸಲ್ಲಿಸಿದರು. ನಿನ್ನೆಯಷ್ಟೇ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದರು.
ಒಂದು ಕಮೆಂಟನ್ನು ಹಾಕಿ