ಮೊಳಕಾಲ್ಮೂರಿನಿಂದ ಇಂದು ಶ್ರೀರಾಮುಲು ನಾಮಪತ್ರ

molakalmuru: MP sriramulu nomination today

21-04-2018

ಬಳ್ಳಾರಿ: ಚಿತ್ರದುರ್ಗದ ಮೊಳಕಾಲ್ಮೂರು ಮತ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಘೋಷಿಸಿದಾಗಿನಿಂದಲೂ ಭಿನ್ನಮತ ಭುಗಿಲೆದ್ದಿದೆ. ಹಾಲಿ ಶಾಸಕ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕಾಗಿ ತಿಪ್ಪೇಸ್ವಾಮಿ ಬೆಂಬಲಿಗರು ತೀವ್ರ ಆಕ್ರೋಶ, ಪ್ರತಿಭಟನೆ ನಡೆಸಿದ್ದರು. ಟಿಕೆಟ್ ನೀಡುವಂತೆ ಒತ್ತಡವನ್ನೂ ಹೇರಲಾಗಿತ್ತು. ಇದರ ಬೆನ್ನಲ್ಲೇ  ಮೊಳಕಾಲ್ಮೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೆ ಸಂಸದ ಶ್ರೀರಾಮುಲು ಸಜ್ಜಾಗಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು, ‘ಇಂದು ನಾನು ಮೊಳಕಾಲ್ಮೂರು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ, ಅಲ್ಲದೇ ಬಳ್ಳಾರಿ ನಗರದಲ್ಲಿ ಸೋಮಶೇಖರ್ ರೆಡ್ಡಿ, ಸಣ್ಣ ಫಕೀರಪ್ಪ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

B. Sriramulu molakalmuru ಪೂಜೆ ಸೋಮಶೇಖರ್ ರೆಡ್ಡಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ