ಕಿತ್ತೂರಲ್ಲಿ ಬಿಗುವಿನ ವಾತಾವರಣ

suresh marihal supporters protest at kittur

21-04-2018

ಬೆಳಗಾವಿ: ಬಿಜೆಪಿಯಿಂದ ಮೂರನೇ ಪಟ್ಟಿ ಬಿಡುಗಡೆ ಹಿನ್ನೆಲೆ ಕಿತ್ತೂರಿನಲ್ಲಿ ಭಿನ್ನಮತ ಭುಗಿಲೆದ್ದಿದೆ. ಮಾಜಿ ಶಾಸಕ ಸುರೇಶ ಮಾರಿಹಾಳ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ, ಕಿತ್ತೂರು ಮತಕ್ಷೇತ್ರ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾಂತೇಶ್ ದೊಡ್ಡಗೌಡರಿಗೆ ಟಿಕೆಟ್ ನೀಡಿರುವುದರಿಂದ ಸುರೇಶ ಮಾರಿಹಾಳ ಬೆಂಬಲಿಗರು ಪ್ರತಿಭಟಿಸಿದ್ದಾರೆ. ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದ್ದು, ರಾಣಿ ಚೆನ್ನಮ್ಮ ವೃತ್ತದಲ್ಲಿ ಸುರೇಶ ಬೆಂಬಲಿಗರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಇದರಿಂದ ಕಿತ್ತೂರಿನಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ