ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮುಗಿಸಿದ  ಬಿಎಸ್ವೈ?

Sangolli Rayanna Brigade v/s B.S.Yeddyurappa

21-04-2018

ಬೆಂಗಳೂರು: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಯಡಿಯೂರಪ್ಪ ವ್ಯವಸ್ಥಿತವಾಗಿ ಮುಗಿಸುತ್ತಿದ್ದಾರೆಯೇ? ಜಿಜೆಪಿ, ಈವರೆಗೆ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಮೂರು ಪಟ್ಟಿ ಬಿಡುಗಡೆ ಮಾಡಿದ್ದು, 213ಮಂದಿ ಸ್ಪರ್ಧಾ ಆಕಾಂಕ್ಷಿಗಳಿಗೆ ಟಿಕೆಟ್ ಪ್ರಕಟಿಸಿದೆ. ಆದರೆ, ಆ ಪಟ್ಟಿಯಲ್ಲಿ ಕೆ.ಎಸ್.ಈಶ್ವರಪ್ಪ ಅವರನ್ನು ಬಿಟ್ಟರೇ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಬೇರೆ ಯಾವ ಆಕಾಂಕ್ಷಿಗಳಿಗೂ ಟಿಕೆಟ್ ನೀಡಿಲ್ಲ.

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಕೆ.ಎಸ್.ಈಶ್ವರಪ್ಪ ಸೇರಿದಂತೆ ಸುಮಾರು 20 ಪದಾಧಿಕಾರಿಗಳು ಈ ಬಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಮಾಜಿ ಸಂಸದ ವಿರೂಪಾಕ್ಷಪ್ಪ-ಸಿಂಧನೂರು, ಸೋಮಣ್ಣ ಬೇವಿನಮರದ್-ಶಿಗ್ಗಾವಿ, ಬೆಂಗಳೂರಿನ ಮಾಜಿ ಮೇಯರ್ ವೆಂಕಟೇಶ ಮೂರ್ತಿ-ಪದ್ಮನಾಭನಗರ, ಮಾಜಿ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ-ಅರಕಲಗೂಡು ಕ್ಷೇತ್ರದ ಟಿಕೆಟ್ ನಿರೀಕ್ಷೆಯಲ್ಲಿದ್ದರು.

ಆದರೆ, ಈಶ್ವರಪ್ಪನವರಿಗೇ ಟಿಕೆಟ್ ನೀಡಿಕೆಗೆ ಗೋಳಾಡಿಸಿದ ಯಡಿಯೂರಪ್ಪ, ಅಮಿತ್ ಷಾ ಮಧ್ಯ ಪ್ರವೇಶದ ನಂತರವೇ ತಣ್ಣಗಾಗಿದ್ದು. ಈಗ ಟಿಕೆಟ್ ಸಿಗದಿರುವುದು ಖಾತ್ರಿ ಯಾಗುತ್ತಿದಂತೆ ಮಾಜಿ ಸಂಸದ ವಿರೂಪಾಕ್ಷ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಸೋಮಣ್ಣ ಬೇವಿನಮರದ್ ಬಂಡಾಯ ಎದ್ದಿದ್ದು ಶಿಗ್ಗಾವಿಯಿಂದ ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈಗ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಪದಾಧಿಕಾರಿಗಳು ಈಗ ಬಿಜೆಪಿಯಿಂದ ಒಬ್ಬೊಬ್ಬರಾಗಿ ಖಾಲಿ ಮಾಡುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ