ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಕಾಂಗ್ರೆಸ್ ತೆಕ್ಕೆಗೆ..?

will Vijayapura BJP district president join congress?

21-04-2018

ವಿಜಯಪುರ: ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ವಿಜಯಪುರ ನಾಗಠಾಣ ಕ್ಷೇತ್ರದಲ್ಲಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ವಿಠ್ಠಲ ಕಟಕದೊಂಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಫ್ಯಾಕ್ಸ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಕಳುಹಿಸಿದ್ದಾರೆ.

ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ. ವಿಜಯಪುರದ ನಾಗಠಾಣ ಮೀಸಲು ಮತ ಕ್ಷೇತ್ರದಿಂದ‌ ವಿಠ್ಠಲ ಕಟಕದೊಂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ವಿಠ್ಠಲ ಕಟಕದೊಂಡ ಬದಲು ಮಾಜಿ ಸಚಿವ ಗೋವಿಂದ ಕಾರಜೋಳ ಹಿರಿಯ ಪುತ್ರ ಗೋಪಾಲ್ ಕಾರಜೋಳ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಟಿಕೆಟ್ ತಪ್ಪಿದ ಹಿನ್ನೆಲೆ ರಾತ್ರಿ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದ ಕಟಕದೊಂಡ, ನಿನ್ನೆ ರಾತ್ರಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಅವರೊಂದಿಗೂ ಚರ್ಚೆ ನಡೆಸಿದ್ದರು.

ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಟಿಕೆಟ್ ಪಡೆದು ನಾಗಠಾಣ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಹೇಳಲಾಗುತ್ತಿದ್ದು, ಸ್ಥಳೀಯ ಕಾಂಗ್ರೆಸ್ ಮುಖಂಡರು ಇದಕ್ಕೆ ಆಕ್ಷೇಪಿಸಿದ್ದಾರೆ ಎಂದೂ ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ