ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

jagadish shettar files nomination from hubballi-dharwad central

23-04-2018

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತ ಕ್ಷೇತ್ರದಿಂದ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್​ ಅವರು ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ಆರನೆಯ ಬಾರಿಗೆ ನಾಮಪತ್ರ ಸಲ್ಲಿಸುತ್ತಿದ್ದೇನೆ. ಜನರ ಆಶೀರ್ವಾದದಿಂದ ಐದು ಬಾರಿ ಆಯ್ಕೆಯಾಗಿದ್ದೇನೆ. ಆರನೆ ಬಾರಿಯೂ ಗೆಲ್ಲುವ ವಿಶ್ವಾಸವಿದೆ. ಕ್ಷೇತ್ರದಲ್ಲಿ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅಲೆ ಪ್ರಾರಂಭವಾಗಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ಸಂಘಟನಾತ್ಮಕ ಹೋರಾಟದಿಂದ ಗೆಲುವು ನಮ್ಮದಾಗಲಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸೋಲಿನ ಭಯದಿಂದ ಬಾದಾಮಿಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಶೆಟ್ಟರ್ ಲೇವಡಿ ಮಾಡಿದರು. ಚಾಮುಂಡೇಶ್ವರಿಯಲ್ಲಿ ಸೋಲುವುದಾಗಿ ಸಿಎಂಗೆ ಇಂಟಲಿಜನ್ಸ್ ವರದಿ ಕೊಟ್ಟಿದೆ. ಬಾದಾಮಿಯಲ್ಲಿ ಬಿಜೆಪಿಯಿಂದ ಸೂಕ್ತ ಅಭ್ಯರ್ಥಿ ನಿಲ್ಲಿಸಲಾಗುವುದು ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ