‘ಜ್ಯಾತ್ಯತೀತ ನಿಲುವಿಂದ ಹಿಂದೆ ಸರಿಯಲ್ಲ’24-04-2018

ಮಂಗಳೂರು: ಚುನಾವಣೆ ಎದುರಿಸಲು ಕಾಂಗ್ರೆಸ್ ಸನ್ನದ್ಧವಾಗಿದೆ ಎಂದು ‌ಸಚಿವ ರಮಾನಾಥ್ ರೈ ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಜಿಲ್ಲೆಯಲ್ಲಿ ಎಂಟು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸಂಪೂರ್ಣವಾಗಿ ಒಡೆದ ಮನೆಯಾಗಿದೆ, ಬಿಜೆಪಿಯವರು ತಮ್ಮ ಹಿರಿಯ ನಾಯಕರನ್ನು ಟೀಕೆ ಮಾಡುತ್ತಿದ್ದಾರೆ. ಅತೃಪ್ತ ಬಿಜೆಪಿಯ ಮುಖಂಡರ ಜೊತೆ ಸಂಪರ್ಕದಲ್ಲಿ ಇದ್ದೇವೆ ಎಂದ ಅವರು, ಸಂಸದ ನಳಿನ್ ಕುಮಾರ್ ಕಟೀಲ್ ರನ್ನು ಬಿಜೆಪಿಯವರೇ ವಿಶ್ರಾಂತಿಗೆ ಕಳಿಸುತ್ತಾರೆ ಎಂದು ವ್ಯಂಗ್ಯವಾಡಿದರು. ನಾನು ಎಲ್ಲಾ ರೀತಿಯ ಮತೀಯವಾದವನ್ನು ವಿರೋಧಿಸುತ್ತೇನೆ, ಅದಕ್ಕೆ ಯಾವ ತ್ಯಾಗ ಮಾಡಲೂ ಸಿದ್ಧ, ವಿರೋಧ ಬಂದರೂ ಜ್ಯಾತ್ಯತೀತ ನಿಲುವಿನಿಂದ ಹಿಂದೆ ಸರಿಯಲ್ಲ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ