ನಾಮಪತ್ರಕ್ಕೆ ಕೊನೆ ದಿನ: ಅಭ್ಯರ್ಥಿಗಳ ದಂಡು

karnataka election today is last date for nomination

24-04-2018

ಬೆಂಗಳೂರು: ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು ರಾಜ್ಯದ ಹಲವಡೆ ನಾಮತ್ರ ಸಲ್ಲಿಸಿದ್ದಾರೆ. ಬೆಂಗಳೂರಿನ ಮಹದೇವಪುರ ಕ್ಷೇತ್ರದ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ಟಿ.ನಾಗೇಶ್ ನಾಮಪತ್ರ ಸಲ್ಲಿಸಿದ್ದಾರೆ. ಸಾವಿರಾರು ಕಾರ್ಯಕರ್ತರೊಂದಿಗೆ ಕೆ.ಆರ್.ಪುರದ ತಾಲ್ಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ.

ಆನೇಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಕಾರ್ಯಕರ್ತರ ಜೊತೆ ಆನೇಕಲ್ ನ ಪ್ರಮುಖ ರಸ್ತೆಗಳಲ್ಲಿ ರ‍್ಯಾಲಿ ಮೂಲಕ ಬಂದ ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದರು.

ವಿಜಯಪುರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿ, ಮಾಜಿ ಶಾಸಕ ರವಿಕಾಂತ ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ. ಇಂಡಿ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ರವಿಕಾಂತ ಪಾಟೀಲ, ಟಿಕೆಟ್ ಸಿಗದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಅಪಾರ ಬೆಂಬಲಿಗರೊಂದಿಗೆ ಇಂಡಿ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರ ಬಿಜೆಪಿ ಅಭ್ಯರ್ಥಿ ದಯಾಸಾಗರ್ ಪಾಟೀಲ್ ನಾಮಪತ್ರ ಸಲ್ಲಿಸಿದರು. ಪಟ್ಟಣದ ಬೀರೆಶ್ವರ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೂ ಬೆಂಬಲಿಗರೊಂದಿಗೆ ಅದ್ದೂರಿ ಮೆರವಣಿಗೆ ಮುಖಾಂತರ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಯಾದಗಿರಿ ಸುರಪುರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ನರಸಿಂಹ ನಾಯಕ ರಾಜುಗೌಡ ಉಮೇದವಾರಿಕೆ ಸಲ್ಲಿಸಿದರು. ಬೃಹತ್ ಪಾದಯಾತ್ರೆ ಮೂಲಕ, ಸಾವಿರಾರು ಜನರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಾಲ್ಕನೇ ಬಾರಿಗೆ ಚುನಾವಣೆ ಅಖಾಡಕ್ಕೆ ಧುಮಿಕಿದ ರಾಜುಗೌಡ,  ಸುರಪುರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಆನೇಕಲ್ ನ ಬಿಎಸ್ಪಿ ಪಕ್ಷದ ಹುರಿಯಾಳು ಗುಡ್ಡಹಟ್ಟಿ ಪ್ರೊ ಶ್ರೀನಿವಾಸ್ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಹಾವೇರಿ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಕುಮಾರಸ್ವಾಮಿ ಮಠದಿಂದ ತಾಹಶೀಲ್ದಾರ ಕಚೇರಿವರಿಗೆ ರೋಡ್ ಶೋ ನಡೆಸಿ, ನಾಮಪತ್ರ ಸಲ್ಲಿಸಿದ್ದಾರೆ.

ಕೊಪ್ಪಳದಲ್ಲಿ ಕೊನೆಗೂ ಸಂಸದ ಸಂಗಣ್ಣ ಕರಡಿ ಒತ್ತಡಕ್ಕೆ ಮಣಿದ ಬಿಜೆಪಿ ಹೈ ಕಮಾಂಡ್ ಕೊಪ್ಪಳದ ಬಿಜೆಪಿ ಅಭ್ಯರ್ಥಿಯಾಗಿ ಸಂಸದನ ಮಗ ಅಮರೇಶ್ ಕರಡಿಗೆ ಟಿಕೆಟ್ ನೀಡಿದ್ದು, ನಾಮಪತ್ರ ಸಲ್ಲಿಸಿದ್ದಾರೆ.

ವಿಜಯಪುರ ನಗರ ಮತಕ್ಷೇತ್ರಕ್ಕೆ ಎತ್ತಿನ ಬಂಡಿಯಲ್ಲಿ ಆಗಮಿಸಿ ವಿಶಿಷ್ಟ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ, ಮಾಜಿ ಡಿವೈಎಸ್ಪಿ ಅನುಪಮಾ ಶೈಣೆ ನೇತೃತ್ವದ ರಾಷ್ಟ್ರೀಯ ಜನಶಕ್ತಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚಂದ್ರಶೇಖರ ತೇಲಿ ನಾಮತ್ರ ಸಲ್ಲಿಸಿದರು.

ಭದ್ರಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರವೀಣ್ ಪಾಟೀಲ್ ಉಮೇದುವಾರಿಕೆ ಸಲ್ಲಿಸಿದ್ದಾರೆ. ತಾಲ್ಲೂಕು ಕಚೇರಿಗೆ ತೆರಳಿದ ಪ್ರವೀಣ್ ಪಾಟೀಲ್ ಚುನಾವಣಾಧಿಕಾರಿ ಡಾ.ದಾಸೇಗೌಡರಿಗೆ ನಾಮಪತ್ರ ಸಲ್ಲಿಸಿದರು.

ರಾಮನಗರ-ಕನಕಪುರ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ರಾಮನಗರ ಕ್ಷೇತ್ರದಿಂದ ಎಚ್.ಲೀಲಾವತಿ ನಾಮಪತ್ರ ಸಲ್ಲಿಸಿದ್ದು, ಕನಕಪುರ ಕ್ಷೇತ್ರದಲ್ಲಿ ನಂದಿನಿಗೌಡ ಉಮೇದುವಾರಿಕೆ ಸಲ್ಲಿಸಿದರು.

 


ಸಂಬಂಧಿತ ಟ್ಯಾಗ್ಗಳು

Nomination election ಅಭ್ಯರ್ಥಿ ವಿಶಿಷ್ಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ