‘ಆತಂಕದಿಂದ ಸಿಎಂ ಎರಡು ಕಡೆ ಸ್ಪರ್ಧೆ’-ಅನಂತಕುಮಾರ್

Ananth Kumar criticizes CM

24-04-2018

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಿ, 150 ಸ್ಥಾನಗಳಲ್ಲಿ ಗೆದ್ದು ಬರುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೇಳಿದ್ದಾರೆ.

ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಇಂದು ಪಕ್ಷದ ಅಭ್ಯರ್ಥಿ ಶಿವನಗೌಡ ನಾಯಕ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಯಾವೊಬ್ಬ ಅಭ್ಯರ್ಥಿಗೂ ಸೋಲಿನ ಭೀತಿ ಇಲ್ಲ. ಈ ಆತಂಕವಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಮತಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಸೇರಿದ ನಂತರ ಯಾವ ಸಿದ್ಧಾಂತಕ್ಕೂ ಬದ್ಧರಾಗಿಲ್ಲ ಎಂದು ಟೀಕಿಸಿದರು.

ಈ ನಡುವೆ, ಬಿಜೆಪಿ ಇಂದು ತನ್ನ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಕಲೇಶಪುರದಿಂದ ಸೋಮಶೇಖರ್, ಶಿಡ್ಲಘಟ್ಟದಿಂದ ಎಚ್. ಸುರೇಶ್, ಶ್ರೀನಿವಾಸಪುರದಿಂದ ಡಾ. ವೇಣುಗೋಪಾಲ್ ಅವರನ್ನು ಕಣಕ್ಕಿಳಿಸಿದೆ. ಬದಾಮಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ನಾಮಪತ್ರ ಸಲ್ಲಿಸಿದ್ದಾರೆ. ಅವರು ಮೊಳಕಾಲ್ಮೂರು ಕ್ಷೇತ್ರದಿಂದಲೂ ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ananth Kumar B. Sriramulu ಸಿದ್ಧಾಂತ ಕೇಂದ್ರ ಸಚಿವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ