ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ.. ಬೈಕ್ ಸವಾರರಿಬ್ಬರ ಸಾವು

Kannada News

19-05-2017

ಮಂಡ್ಯ:- ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಮಂಡ್ಯ ಜಿಲ್ಲೆ, ಮದ್ದೂರು ಪಟ್ಟಣದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪ ನಡೆದಿದೆ. ಅಜಿತ್(೨೨), ಉಮೇಶ್(೨೬)  ಎಂಬುವವರು ಮೃತ ದುರ್ದೈವಿ ಗಳಾಗಿದ್ದು ತಡರಾತ್ರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಾತ್ರಿ ಪಾಳಿ ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಅಪಘಾತವಾಗಿ ಸಾವು ಸಂಭವಿಸಿದೆ . ಈ ಘನೆಯಿಂದಾಗಿ ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ