ನಾಳೆಯಿಂದ 2 ದಿನ ರಾಹುಲ್ ರಾಜ್ಯ ಪ್ರವಾಸ

Rahul gandhi visits karnataka for 2 days

25-04-2018

ಬೆಂಗಳೂರು: ನಾಳೆಯಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಏಪ್ರಿಲ್ 26 ಮತ್ತು 27ರಂದು ರಾಜ್ಯದ 4 ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ನಾಳೆ ಬೆಳಿಗ್ಗೆ ಅಂಕೋಲದ ಜೈಹಿಂದ್ ಸ್ಕೂಲ್ ಮೈದಾನಕ್ಕೆ ಆಗಮಿಸಲಿದ್ದು, ಬಳಿಕ ಅಂಕೋಲ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ ಕುಮಟಾಕ್ಕೆ ಪ್ರಯಾಣ ಬೆಳೆಸಲಿದ್ದು, ಮಾಸ್ತಿಕಟ್ಟೆ ಸರ್ಕಲ್ ನಿಂದ ಗಿಬ್ ಹೈಸ್ಕೂಲ್ ಸರ್ಕಲ್ ವರೆಗೂ ಸ್ವಾಗತ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ‌ ಮಾಡಲಿರುವ ರಾಹುಲ್, ಬಳಿಕ ಹೊನ್ನಾವರಕ್ಕೆ ತೆರಳಲಿದ್ದಾರೆ. ಹೊನ್ನಾವರದ ಸರಸ್ವತಿ ವೃತ್ತದಲ್ಲಿ ಪಕ್ಷದ ಮುಖಂಡರೊಂದಿಗೆ ಚರ್ಚೆ, ಸಂಜೆ ಭಟ್ಕಳದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ನಂತರ ಮುರುಡೇಶ್ವರದಲ್ಲೇ ವಾಸ್ತವ್ಯ ಹೂಡಲಿದ್ದಾರೆ ರಾಹುಲ್ ಗಾಂಧಿ.

27ರ ರಂದು ಬಂಟ್ವಾಳದಲ್ಲಿ ಕಾರ್ಯಕರ್ತರ ಸಭೆಯ ನಂತರ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಮಧ್ಯಾಹ್ನ ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು. ಸಂಜೆ ಮೈಸೂರಿನ ಪಿರಿಯಾಪಟ್ಟಣದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rahul Gandhi election ವಾಸ್ತವ್ಯ ಹೈಸ್ಕೂಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ