‘ಲೋಕಪಾಲ್ ಬಿಲ್ ಚರ್ಚೆಗೆ ಖರ್ಗೆ ಯಾಕೆ ಬಂದಿಲ್ಲ’25-04-2018

ಶಿವಮೊಗ್ಗ: ಕರ್ನಾಟಕಕ್ಕೆ ಆಗಮಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ಈ ಪ್ರಶ್ನೆಗಳನ್ನು ಕೇಳಬೇಕಾಗುತ್ತದೆ ಎಂದು, ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಬೆಂಗಳೂರಿನಲ್ಲಿ ಮೂಲ ಸೌಕರ್ಯಗಳಿಲ್ಲ. ಲೋಕಪಾಲ್ ಬಿಲ್ ಚರ್ಚೆಗೆ ಖರ್ಗೆಯವರು ಯಾಕೆ ಹಾಜರಾಗಿಲ್ಲ, ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ಮಹಿಳೆಯರು ಮತ್ತು ಮಕ್ಕಳಿಗೆ ಕರ್ನಾಟಕದಲ್ಲಿ ರಕ್ಷಣೆ ಇಲ್ಲ. ಇದರ ಬಗ್ಗೆಯೂ ಮಾತಾಡಲಿ, ಕರ್ನಾಟಕದ ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳು ಸಾಯುತ್ತಿರುವುದಕ್ಕೆ ಕರ್ನಾಟಕ ಸರ್ಕಾರವೇ ಕಾರಣ ಎಂದು ದೂರಿದ್ದಾರೆ.


ಸಂಬಂಧಿತ ಟ್ಯಾಗ್ಗಳು

sambit patra hospitals ಭ್ರಷ್ಟಾಚಾರ ಮೂಲ ಸೌಕರ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ