‘ಕಾಂಗ್ರೆಸ್ ಗೆ ಜನ ತಕ್ಕ ಪಾಠ ಕಲಿಸಬೇಕು’-ಜಿವಿಎಲ್ ರಾವ್25-04-2018

ಕಲಬುರಗಿ: ಕಾಂಗ್ರೆಸ್ ಇದ್ದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತೆ ಎಂದು, ಬಿಜೆಪಿ ರಾಷ್ಟ್ರೀಯ ವಕ್ತಾರ ಜಿ.ವಿ.ಎಲ್ ನರಸಿಂಹ ರಾವ್ ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ನಾಲ್ಕು ವರ್ಷದಲ್ಲಿ ಅತ್ಯಂತ ಹೆಚ್ಚು ಭ್ರಷ್ಟಾಚಾರ ನಡೆದಿದ್ದು ಕರ್ನಾಟಕದಲ್ಲಿ ಎಂದು ಆರೋಪಿಸಿದರು. ಕಾಂಗ್ರೆಸ್ ಮಾಡಿದ ಪಾಪಕ್ಕೆ ಕರ್ನಾಟಕದ ಜನತೆ ತಕ್ಕ ಪಾಠ ಕಲಿಸಬೇಕು ಎಂದಿದ್ದಾರೆ.

ಜನರ ಹಣದಲ್ಲಿ ಹೈಫೈ ಜೀವನ ನಡೆಸುವುದೇ ರಾಹುಲ್ ಗಾಂಧಿ ಹಾಬಿ, ದಿಲ್ಲಿಯಲ್ಲಿ ಕುಳಿತು ದೊಡ್ಡದಾಗಿ ಮಾತನಾಡುವ ರಾಹುಲ್ ರಾಜ್ಯಕ್ಕೆ ನೀಡಿದ ಕೊಡುಗೆ ಶೂನ್ಯ, ಭ್ರಷ್ಟಾಚಾರ ಮಾಡುವುದು, ಮಾಡಿದವರನ್ನು ರಕ್ಷಿಸುವುದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ ಎಂದು ಟೀಕಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

gvl narasimha rao congress ಭ್ರಷ್ಟಾಚಾರ ಆರೋಪ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ