ಬಸ್ ಹರಿದು ಯುವತಿ ಸಾವು

Bus accident: A young girl died

25-04-2018

ಬೆಂಗಳೂರು: ವೆಸ್ಟ್ ಆಫ್ ಕಾರ್ಡ್ ರಸ್ತೆಯ ಇಸ್ಕಾನ್ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್‍ನಲ್ಲಿ ಹಿಂಬದಿ ಕುಳಿತು ಹೋಗುತ್ತಿದ್ದ ಯುವತಿ ಮೃತಪಟ್ಟರೆ ಸವಾರ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತಪಟ್ಟವರನ್ನು ತಿಂಡ್ಲುವಿನ ಚೈತ್ರಾ(21) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸಂಜಯ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾವೇರಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಸಂಜಯ್ ಹಾಗೂ ಚೈತ್ರಾ ಅತ್ಮೀಯ ಸ್ನೇಹಿತರಾಗಿದ್ದರು.

ಇವರಿಬ್ಬರು ರಾಜಾಜಿನಗರದಲ್ಲಿ ನಡೆಯುತ್ತಿದ್ದ ತಮ್ಮ ಕಾಲೇಜಿನ ಉಪನ್ಯಾಸಕರೊಬ್ಬರ ವಿವಾಹಕ್ಕೆ ರಾತ್ರಿ 9ರ ವೇಳೆ ಬೈಕ್‍ನಲ್ಲಿ ಹೋಗುತ್ತಿದ್ದರು ಮಾರ್ಗ ಮಧ್ಯೆ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಇಸ್ಕಾನ್ ಬಳಿ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಕೆಳಗೆಬಿದ್ದ ಚೈತ್ರಾ ಮೇಲೆ ಬಸ್‍ನ ಹಿಂಬದಿ ಚಕ್ರ ಹರಿದು ಮೃತಪಟ್ಟಿದ್ದು ಸಂಜಯ್ ಗಾಯಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಸಂಚಾರ ಪೊಲೀಸರು ಬಸ್ ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident private bus ಇಸ್ಕಾನ್ ಉಪನ್ಯಾಸಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ