ಬಿಜೆಪಿ ಪರ ಪ್ರಚಾರ: ಡಾಟಾ ಎಂಟ್ರಿ ಆಪರೇಟರ್ ವಜಾ

Promotion of BJP: The Data Entry Operator fired

26-04-2018

ಶಿವಮೊಗ್ಗ: ಬಿಜೆಪಿ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ನಡೆಸುತ್ತಿದ್ದ ಗ್ರಾಮ ಪಂಚಾಯತ್ನ ಡಾಟಾ ಎಂಟ್ರಿ ಆಪರೇಟರ್ ಅನ್ನು ಕೆಲಸದಿಂದ ವಜಾ ಮಾಡಲಾಗಿದೆ. ವಿನಯ್ ವಜಾಗೊಂಡ ಡಾಟಾ ಆಪರೇಟರ್. ಶಿಕಾರಿಪುರ ತಾಲ್ಲೂಕಿನ ಕಪ್ಪನಹಳ್ಳಿಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ವಿನಯ್ ಎಂಬಾತ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದು, ವಾಟ್ಸಪ್ ನಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ, ವಕೀಲ ಮೈಲಾರಪ್ಪ ಎಂಬುವರು ಚುನಾವಣಾಧಿಕಾರಗಳಿಗೆ ದೂರು ನೀಡಿದ್ದರು. ದೂರಿನನ್ವಯ ಪರಿಶೀಲನೆ ನಡೆಸಿದ ಚುನಾವಣಾಧಿಕಾರಿಗಳು ವಿನಯ್ ನನ್ನು ವಜಾಗೊಳಿಸಿ ಆದೇಶಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

panchayath data entery operator ವಾಟ್ಸಪ್ ಕೆಲಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ