ಆನೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿ ಬಲಿ

Elephant Attack: Forest Department staff died

26-04-2018

ಮಂಡ್ಯ: ಆನೆ ದಾಳಿಗೆ ಅರಣ್ಯ ಸಿಬ್ಬಂದಿಯೊಬ್ಬರು ಬಲಿಯಾಗಿದ್ದಾರೆ. ಮಹದೇವು(47) ಮೃತ ಸಿಬ್ಬಂದಿ. ಮಳವಳ್ಳಿ ತಾಲ್ಲೂಕಿನ ಸೋಲಬ ಗ್ರಾಮದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಕಳೆದ ರಾತ್ರಿ ಗ್ರಾಮಕ್ಕೆ ಬಂದಿದ್ದ ಆನೆಗಳ ಹಿಂಡನ್ನು ಕಾಡಿಗೆ ಓಡಿಸಲು ಮಹಾದೇವು ಸೇರಿದಂತೆ ಅರಣ್ಯ  ಸಿಬ್ಬಂದಿ ತೆರಳಿದ್ದರು. ಕಾರ್ಯಾಚರಣೆ ವೇಳೆ ಮಹಾದೇವು ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಸಿಬ್ಬಂದಿ ಪಾರಾಗಿದ್ದಾರೆ. ಸ್ಥಳಕ್ಕೆ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

forest gaurd ಕಾರ್ಯಾಚರಣೆ ಸಿಬ್ಬಂದಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ