ಸಿಎಂಗೆ ಹೆಚ್.ಡಿ ಕುಮಾರ ಸ್ವಾಮಿ ತಿರುಗೇಟು

H.D Kumaraswamy v/s kumaraswamy

26-04-2018

ಮೈಸೂರು: ಬಿಜೆಪಿ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಡಿ.ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ. ಮೈಸೂರಲ್ಲಿ ಮಾತನಾಡಿದ ಕುಮಾರ ಸ್ವಾಮಿ, ಹಣ ಬಲ, ಜಾತಿ ಬಲದಿಂದ ಅಧಿಕಾರಕ್ಕೆ ಬರುತ್ತೇನೆ ಎಂಬ ಲೆಕ್ಕಾಚಾರ ಉಲ್ಟಾ ಹೊಡೆಯಲಿದೆ. ಚಾಮುಂಡೇಶ್ವರಿಯಲ್ಲಿ ಸೋಲಾಗುತ್ತೆ ಎಂಬ ಹೆದರಿಕೆಯಿಂದ ಸಿಎಂ ಬಾದಾಮಿಗೆ ಪಲಾಯನ ಮಾಡಿದ್ದಾರೆ ಎಂದು ಕುಟುಕಿದ್ದಾರೆ. ಬಾದಾಮಿಯಲ್ಲಿ ಸಿದ್ದರಾಮಯ್ಯ ಮತ್ತು ಶ್ರೀರಾಮುಲು ವಲಸಿಗರು. ಜೆಡಿಎಸ್ ಅಭ್ಯರ್ಥಿ ಸ್ಥಳೀಯರಾಗಿದ್ದು, ಅವರೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಾತಿ ಮುಖಂಡರನ್ನು ಬಿಟ್ಟು ಗೆಲ್ಲುವ ತಂತ್ರಗಾರಿಕೆ ಮಾಡಲಾಗುತ್ತಿದೆ. ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸುವ ತಂತ್ರಗಾರಿಕೆಯಲ್ಲಿ ಸಕ್ಸಸ್ ಆಗಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿವೆ, ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ವರುಣಾದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಘಟನೆ ಜೆಡಿಎಸ್ ಗೆ ಪ್ಲಸ್ ಆಗುತ್ತೆ ಎಂದರು.

ರಾಜ್ಯದಲ್ಲಿ ಶೌಚಾಲಯ ಕಟ್ಟಲು ಮರಳಿಲ್ಲ, ಕೇರಳಕ್ಕೆ ನೂರಾರು ಲಾರಿ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನಗೂ ಡಿ‌.ಕೆ.ಶಿವಕುಮಾರ್ ಗೂ ಯಾವುದೇ ಸಂಬಂಧ ಇಲ್ಲ. ಕರ್ನಾಟಕದ ಜನತೆಗೆ ನರೇಂದ್ರ ಮೋದಿ ಏನೂ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.D Kumaraswamy toilets ಸ್ಥಳೀಯ ಉದಾಹರಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ