ನಡುರಸ್ತೆಯಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ

shocking incident at bansawadi!

26-04-2018

ಬೆಂಗಳೂರು: ಬಾಣಸವಾಡಿಯ ಲಿಂಗರಾಜಪುರದಲ್ಲಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಜೊತೆ ಅಸಭ್ಯವಾಗಿ ವರ್ತಿಸಿ ಕಾಲಿನಿಂದ  ಎದೆಗೆ ಒದ್ದು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಲಿಂಗರಾಜಪುರದ ಬಳಿ ಇಬ್ಬರು ಯುವತಿಯರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ  ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅಸಭ್ಯವಾಗಿ ವರ್ತಿಸಿ ಯುವತಿಯರಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಇಬ್ಬರು ಯುವತಿಯರಿಗೆ ಕಾಲಿನಿಂದ ಒದಿದ್ದು, ಓರ್ವ ಯುವತಿಯ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಕಿಡಿಗೇಡಿಗಳು ಯುವತಿಯರಿಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಯಗೊಂಡಿರುವ ಯುವತಿಯರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

cctv Harrasement ಕಿಡಿಗೇಡಿ ಅಸಭ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ