ನೆಲಮಂಗಲ: ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

Theft at nelamangala ramalinga chowdeshwari temple

26-04-2018

ಬೆಂಗಳೂರು: ರಾಮಲಿಂಗ ಚೌಡೇಶ್ವರಿ ದೇವಾಲಯಕ್ಕೆ ನುಗ್ಗಿರುವ ದುಷ್ಕರ್ಮಿಗಳು ಹುಂಡಿಯಲ್ಲಿದ್ದ ಹಣ ಚಿನ್ನದ ತಳಿ ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿರುವ ದುರ್ಘಟನೆ ನೆಲಮಂಗಲದ ವೀವರ್ಸ್ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದಿದೆ

ದೇವಾಲಯದ ಕಿಟಕಿಯ ಸರಳನ್ನು ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಹುಂಡಿ ಒಡೆದು ಅದರಲ್ಲಿ ಸುಮಾರು ದಿನಗಳಿಂದ ಸಂಗ್ರಹವಾಗಿದ್ದು ಸುಮಾರು 70 ಸಾವಿರ ನಗದು ಸೇರಿದಂತೆ, ದೇವರ ಮೇಲಿದ್ದ ತಾಳಿಯನ್ನು ದೋಚಿದ್ದಾರೆ. ಕೃತ್ಯಕ್ಕೂ ಮುನ್ನ ದೇವಾಲಯದ ಆವರಣದಲ್ಲಿದ್ದ ಸಿಸಿ ಕ್ಯಾಮೆರಾವನ್ನು ವಿರೂಪಗೊಳಿಸಲಾಗಿದೆ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ನೆಲಮಂಗಲ ಪಟ್ಟಣ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

temple theft ದೇವಾಲಯ ನಗದು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ