ಬಸ್ ನಲ್ಲಿ ಬೆಂಕಿ: ತಪ್ಪಿದ ಭಾರೀ ಅನಾಹುತ

fire at bus: driver saved all the passengers

26-04-2018

ಬೆಂಗಳೂರು: ದೇವನಹಳ್ಳಿಯ ರಾಣಿಕ್ರಾಸ್ ಬಳಿ ನಿನ್ನೆ ರಾತ್ರಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‍ಆರ್‍ಟಿಸಿ)ಯ ಐರಾವತ ಬಸ್‍ನ ಎಂಜಿನ್‍ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.

ಬೆಂಗಳೂರಿನಿಂದ ಐರಾವತ ಬಸ್ ಹೈದರಾಬಾದ್‍ಗೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ದೇವನಹಳ್ಳಿಯ ರಾಣಿಕ್ರಾಸ್ ಬಳಿ ಎಂಜಿನ್‍ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಕೂಡಲೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿ ಆಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಬಸ್‍ನಲ್ಲಿದ್ದ 32 ಜನ ಪ್ರಯಾಣಿಕರು ಸುರಕ್ಷಿತವಾಗಿ ಕೆಳಗಿಳಿದಿದ್ದು ಯಾರಿಗೂ ಯಾವುದೇ ಆಪಾಯವಾಗಿಲ್ಲ ಬೆಂಕಿಯಿಂದ ಬಸ್ ತುಂಬಾ ದಟ್ಟ ಹೊಗೆ ಆವರಿಸಿದ್ದು ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿಯಿಂದ ಬಸ್‍ನ ಎಂಜಿನ್ ಸಂಪೂರ್ಣ ಸುಟ್ಟು ಹೋಗಿದೆ.


ಸಂಬಂಧಿತ ಟ್ಯಾಗ್ಗಳು

Bus engineen ಪ್ರಯಾಣಿಕ ಐರಾವತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ