ಕಾಂಗ್ರೆಸ್ ಹಾಗು ಜೆಡಿಸ್ ಕಾರ್ಯಕರ್ತರ ಮಾರಾಮಾರಿ!

congress workers and jds workers fought each other

27-04-2018

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನಲ್ಲಿ ರಾಜಕೀಯ ದ್ವೇಷಕ್ಕೆ ಅಮಾಯಕನೊಬ್ಬ ಬಲಿಯಾಗಿದ್ದಾನೆ. ಹಳೆ ಉಪ್ಪಾರಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕಾಂಗ್ರೆಸ್ ಹಾಗು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ರಾಮರೆಡ್ಡಿ ಎಂಬಾತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬ ನರೇಂದ್ರ ರೆಡ್ಡಿ ಹಾಗೂ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುದ್ದಿ ಹರಡುತ್ತಿದ್ದಂತೆ ಆಸ್ಪತ್ರೆ ಬಳಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದಾರೆ. ಈ ವೇಳೆ ಆಕ್ರೋಶಭರಿತರಾಗಿ ಪೊಲೀಸ್ ವಾಹನಗಳ ಮೇಲೆ ದಾಳಿ ಮಾಡಿ, ವಾಹನಗಳ ಗಾಜು ಒಡೆದುಹಾಕಿದ್ದಾರೆ. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪೊಲೀಸರ ಜೊತೆ ಜೆಡಿಎಸ್ ಕಾರ್ಯಕರ್ತರ ವಾಗ್ವಾದವೂ ನಡೆಯಿತು. ಇದರಿಂದ ತಾಲ್ಲೂಕು ಆಸ್ಪತ್ರೆ ಬಳಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೂದಿ ಮುಚ್ಚಿದ ಕೆಂಡದಂತಿದೆ ಗೌರಿಬಿದನೂರು.


ಸಂಬಂಧಿತ ಟ್ಯಾಗ್ಗಳು

Congress JDS workers ವಾಗ್ವಾದ ಬಂಧನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ