ಹನುಮಂತೇಗೌಡ ವಿರುದ್ಧ ಸುಳ್ಳು ಪ್ರಮಾಣ ಪತ್ರ ಆರೋಪ27-04-2018

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹನುಮಂತೇಗೌಡ ವಿರುದ್ಧ ಪ್ರಗತಿಪರ ರೈತ ಮುಖಂಡ ಮುನೇಗೌಡ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ  ಪತ್ರಿಕಾಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ ಮುನೇಗೌಡ, ಜೆಡಿಎಸ್ ಅಭ್ಯರ್ಥಿ ಹನುಮಂತೇಗೌಡ ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆಂದು ಆರೋಪಿಸಿದ್ದಾರೆ.

ಹನುಂತೇಗೌಡ ಬಿಡಿಎ ಮತ್ತು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕು ಕಸಬಾ ಹೋಬಳಿ ನಾಗಶೆಟ್ಟಿಹಳ್ಳಿಯಲ್ಲಿರುವ ಬಿಡಿಎ ಜಾಗ ಒತ್ತುವರಿ ಮಾಡಿ, ನಂತರ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆ ನೀಡಿದ್ದಾರೆಂದು ಆರೋಪ ಮಾಡಿದ್ದು, ಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿ ಈ ಮೂಲಕ ತಮ್ಮ ಆಸ್ತಿ ವಿವರಗಳನ್ನು ಮರೆ ಮಾಚಿದ್ದಾರೆ. ಇತ್ತ ವಿದ್ಯಾಭ್ಯಾಸದ ಕುರಿತಾಗಿಯೂ ಸುಳ್ಳು ಮಾಹಿತಿ ನೀಡಿದ್ದಾರೆ, ಹನುಮಂತೆಗೌಡ ಅವಿದ್ಯಾವಂತ ಆದರೆ ಏಳನೇ ತರಗತಿ ಓದಿದ್ದೇನೆ ಎಂದು ಪ್ರಮಾಣ ಪತ್ರದಲ್ಲಿ ನಮೂದಿಸಿದ್ದಾರೆ ಎಂದು ಆರೋಪ ಹೊರಿಸಿದ್ದಾರೆ ರೈತ ಮುಖಂಡ ಮುನೇಗೌಡ.


ಸಂಬಂಧಿತ ಟ್ಯಾಗ್ಗಳು

hanumathe gowda BDA ಒತ್ತುವರಿ ಪತ್ರಿಕಾಗೋಷ್ಠಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ