‘ರಾಜ್ಯದ ಉದ್ದಗಲಕ್ಕೂ ಪ್ರಧಾನಿ ಸಂಚರಿಸಲಿದ್ದಾರೆ’

sadananda gowda election campaign at hebbal constituency

27-04-2018

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತ ನಿರ್ಮಾಣದ ಕನಸಿಗೆ ರಾಜ್ಯದ ಮತದಾರರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಹೆಬ್ಬಾಳ ಮತಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ರಾಜ್ಯದ ಮತದಾರರು ಮೋದಿ ನೇತೃತ್ವದ ಆಭಿವೃದ್ದಿ ಪರ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ನವ ಬೆಂಗಳೂರು-ನವ ಭಾರತ ಘೋಷಣೆ ಅಡಿಯಲ್ಲಿ ಪ್ರಧಾನಿ ಮೋದಿಯವರ ಕನಸನ್ನು ನನಸಾಗಿಸುವುದು ನಮ್ಮ ಕೈಯಲ್ಲಿದೆ. ರಾಜ್ಯದ ಮತದಾರರು ಈ ನಿಟ್ಟಿನಲ್ಲಿ ಈಗಾಗಲೇ ನಿರ್ಧಾರವನ್ನು ಕಂಡುಕೊಂಡಿರುವ ಶುಭ ಸೂಚನೆಗಳು ಕಂಡಬರುತ್ತಿವೆ. ರಾಜ್ಯದ ಉದ್ದಗಲಕ್ಕೂ ಪ್ರಧಾನಿ ಮೋದಿಯವರು ಸಂಚರಿಸಲಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲಿದ್ದಾರೆ ಎಂದು ಹೇಳಿದರು.

ಚುನಾವಣೆ ಸಂದರ್ಭದಲ್ಲಿ ಹಣವನ್ನು ನೀರಿನಂತೆ ಚೆಲ್ಲುವ ಅಭ್ಯರ್ಥಿಗಳು ಅಧಿಕಾರದ ಗದ್ದುಗೆ ಏರಿದ ಕೂಡಲೇ ಭ್ರಷ್ಟಾಚಾರವನ್ನು ಪ್ರಾರಂಭಿಸುತ್ತಾರೆ. ಸುಶಿಕ್ಷಿತ ಹಾಗೂ ಸುಸಂಸ್ಕೃತರಾದ ನಾರಾಯಣಸ್ವಾಮಿ ಅವರಿಗೆ ಮತ ನೀಡುವ ಮೂಲಕ ಅಭಿವೃದ್ಧಿಗೆ ಮತ ನೀಡಿ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

D. V. Sadananda Gowd narendra modi ಭ್ರಷ್ಟಾಚಾರ ನವ ಭಾರತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ