ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

local jds leaders assault on congress worker !

28-04-2018

ಮಂಡ್ಯ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಜೆಡಿಎಸ್ ಮುಖಂಡರು ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ಮಂಡ್ಯದ ನಾಗಮಂಗಲ ತಾಲ್ಲೂಕಿನ ದಂಡಿಗನಹಳ್ಳಿಯಲ್ಲಿ ನಡೆದಿದೆ. ಶ್ರೀನಿವಾಸ್ ಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತ. ಚೆಲುವರಾಯಸ್ವಾಮಿ ಜೊತೆ ಗುರತಿಸಿಕೊಂಡಿದ್ದರು ಶ್ರೀನಿವಾಸ್. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವಂತೆ ಜೆಡಿಸ್ ಸ್ಥಳೀಯ ಮುಖಂಡರು ಒತ್ತಡ ಹೇರುತ್ತಿದ್ದು, ಇದಕ್ಕೆ ಒಪ್ಪದಿದ್ದರಿಂದ ಮನಸೋ ಇಚ್ಚೆ ಥಳಿಸಿ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕಿರಣ್, ಮಂಜುನಾಥ್, ರಾಜಣ್ಣ ಎಂಬುವರ ವಿರುದ್ಧ ಶ್ರೀನಿವಾಸ್ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

congress worker N.Chaluvaraya Swamy ಥಳಿಸಿ ಮುಖಂಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ