ಬಿಜೆಪಿ ಅಭ್ಯರ್ಥಿ ಯೋಗಾ ರಮೇಶ್ ವಿರುದ್ಧ ಎಫ್ಐಆರ್

FIR against Arkalgud bjp candidate Yoga Ramesh

28-04-2018

ಹಾಸನ: ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಯೋಗಾ ರಮೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿನ್ನೆ ಅರಕಲಗೂಡಿನಲ್ಲಿ ನಡೆದ ಬಿಜೆಪಿ ಸಮಾವೇಶಕ್ಕೆ ಆಗಮಿಸಿದ ಕರ್ಯಕರ್ತರಿಗೆ ಹಣ ಹಂಚಿದ ಆರೋಪದ ಮೇಲೆ ದೂರು ದಾಖಲಾಗಿದೆ. ಅರಕಲಗೂಡು ತಾಲ್ಲೂಕಿನ ಕ್ರೀಡಾಂಗಣದಲ್ಲಿ ನಡೆದ ಬಿಜೆಪಿ ಸಮಾವೇಶಕ್ಕೆ ಆಗಮಿಸಿದ ಕಾರ್ಯಕರ್ತರಿಗೆ ತಲಾ ಒಬ್ಬರಿಗೆ 500 ರೂ ಹಣ ಹಂಚಲಾಗಿತ್ತು ಎಂದು ತಿಳಿದು ಬಂದಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಿದ್ದರು. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Yoga Ramesh Arkalgud ಎಫ್ಐಆರ್ ಕ್ರೀಡಾಂಗಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ