‘ನನ್ನ ಕ್ಷೇತ್ರದಲ್ಲಿ ನನಗೆ ಪ್ರತಿಸ್ಪರ್ಧಿಗಳಿಲ್ಲ’- ಗುಂಡೂರಾವ್

dinesh gundu rao election campaign at gandhinagar

28-04-2018

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆನು ಕೆಲವೇ ದಿನಗಳು ಬಾಕಿ ಇದ್ದು, ಕಾಂಗ್ರೆಸ್ ಮುಖಂಡರು ಪ್ರಚಾರದ ಕಣಕ್ಕೆ ಧುಮುಕಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಭರ್ಜರಿ ಪ್ರಚಾರ ನಡೆಸಿದರು. ಗಾಂಧಿನಗರ ಕ್ಷೇತ್ರದಾದ್ಯಂತ ಪಾದಯಾತ್ರೆ ಮಾಡುವ ಮೂಲಕ, ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಕ್ಷೇತ್ರದ ಸಮಸ್ಯೆಗಳನ್ನು ದಿನೇಶ್ ಗುಂಡೂರಾವ್ ಬಳಿ ಸ್ಥಳೀಯರು ಹೇಳಿಕೊಳ್ಳುತ್ತಿದ್ದರು. ಗುಂಡೂರಾವ್ ಅವರಿಗೆ ನೂರಾರು ಬೆಂಬಲಿಗರು ಮತ್ತು ಸ್ಥಳೀಯ ಕಾರ್ಪೊರೇಟರ್ಗಳು ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ದಿನೇಶ್ ಗುಂಡುರಾವ್, ಈ ಕ್ಷೇತ್ರದಲ್ಲಿ ನನಗೆ ಪ್ರತಿಸ್ಪರ್ಧಿಗಳಿಲ್ಲ. ರಾಜ್ಯ ಸರ್ಕಾರದ ಕೆಲಸಗಳು ನನ್ನ ಕೈಹಿಡಿಯಲಿವೆ. ನನ್ನ ಕ್ಷೇತ್ರದಲ್ಲಿಯೂ ಉತ್ತಮ ಕೆಲಸಗಳಾಗಿವೆ, ಪ್ರಚಾರದ ಸಂದರ್ಭದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ