ಸಂರಕ್ಷಿತ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ನಿಷೇಧ30-04-2018

ಬೆಂಗಳೂರು: ದೇಶಾದ್ಯಂತ ಸಂರಕ್ಷಿತ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು, ಈ ಸಂರಕ್ಷಿತ ಪ್ರದೇಶಗಳನ್ನು ಪ್ಲಾಸ್ಟಿಕ್ ಮುಕ್ತ ವಲಯಗಳೆಂದು ಘೋಷಿಸಿದೆ. ದೇಶದ ಜನತೆಯಲ್ಲಿ ಪ್ಲಾಸ್ಟಿಕ್ ಬಳಕೆಯ ನಿಷೇಧ ಕುರಿತು ಜಾಗೃತಿ ಮೂಡಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಪರಿಸರ ಸಚಿವಾಲಯ ನಿರ್ದೇಶನ ನೀಡಿದೆ.

ಈ ಕುರಿತು  ಪರಿಸರ ಸಚಿವ ಡಾ. ಹರ್ಷವರ್ಧನ್ ಯಾವುದೇ ರೂಪದ ಪ್ಲಾಸ್ಟಿಕ್ ಬಳಕೆಯನ್ನು ಸಂರಕ್ಷಿತ ಪ್ರದೇಶಗಳಲ್ಲಿ ಸಂಪೂರ್ಣ ನಿಷೇಧಿಸಲಾಗಿದೆ ಮತ್ತು ಈ ಪ್ರದೇಶಗಳನ್ನು ಪ್ಲಾಸ್ಟಿಕ್ ಮುಕ್ತ ವಲಯಗಳೆಂದು ಘೋಷಿಸಲಾಗಿದೆ.  2018ರ ವಿಶ್ವ ಪರಿಸರ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಪರಿಸರ ಕಾರ್ಯದರ್ಶಿ ಸಿ.ಕೆ.ಮಿಶ್ರ ಹೇಳಿಕೆ ನೀಡಿದ್ದು ಮೀಸಲು ಅರಣ್ಯಗಳನ್ನು ಪ್ಲಾಸ್ಟಿಕ್ ಮುಕ್ತ ವಲಯಗಳಾಗಿ ಘೋಷಿಸಲಾಗಿದೆ. ಅಧಿಕಾರಿಗಳು ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Harsh Vardhan plastic ಜಾಗೃತಿ ಸಂರಕ್ಷಿತ ಪ್ರದೇಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ