ಬಿಜೆಪಿ ಮುಖಂಡನಿಂದ ನೀತಿ ಸಂಹಿತೆ ಉಲ್ಲಂಘನೆ

Code of Conduct violation by BJP leader

30-04-2018

ಶಿವಮೊಗ್ಗ: ಬಿಜೆಪಿ ಮುಖಂಡ ಪಂಚಾಕ್ಷರಯ್ಯ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹುಟ್ಟು ಹಬ್ಬದ ಹೆಸರಿನಲ್ಲಿ ನಗರದ ನಿಜಲಿಂಗಯ್ಯ ಸಭಾ ಭವನದಲ್ಲಿ ಭೋಜನ ಕೂಟ ಆಯೋಜನೆ ಮಾಡಿದ್ದಾರೆ. ಎನ್.ಡಿ.ವಿ ಹಾಸ್ಟೆಲ್ ನಲ್ಲಿ ಬಿಜೆಪಿಯ ವೀರಶೈವ ಸಮಾಜದ ಮತದಾರರ ಜಾಗೃತ ಸಭೆ ನಡೆಸಿದ ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು.

ಮತದಾರರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ, ನೈರುತ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೆಗೌಡ ಸೇರಿ ವೀರಶೈವ ಸಮಾಜದ ಹಲವಾರು ಜನ ಭಾಗಿಯಾಗಿದ್ದರು. ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯದೆ ಭೋಜನ ಕೂಟ ಆಯೋಜನೆ ಮಾಡಿದಕ್ಕೆ ಊಟ ವಶಕ್ಕೆ ಪಡೆದಿದ್ದಾರೆ ಚುನಾವಣಾಧಿಕಾರಿಗಳು. ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

code of conduct violation ವೀರಶೈವ ಮತದಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ