‘ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ’-ಎಂ.ಬಿ.ಪಾಟೀಲ30-04-2018

ವಿಜಯಪುರ: ಕಾಂಗ್ರೆಸ್ ಆಂತರಿಕ ಸಮೀಕ್ಷೆಯಲ್ಲಿ 135-145 ಸ್ಥಾನ ಗಳಿಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಕಾಂಗ್ರೆಸ್ ಸ್ವಂತ ಬಲದ ಮೇಲೆ ಸರಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯಪುರದಲ್ಲಿ ಮಾತನಾಮಾಡಿದ ಎಂ.ಬಿ.ಪಾಟೀಲ ಬಿಜೆಪಿ ನಾಯಕರಿಗೆ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕೇಂದ್ರ ಸಂಪುಟದಲ್ಲಿ ಲಿಂಗಾಯತರಿಗೆ ಸಚಿವ ಸ್ಥಾನ ನೀಡಿಲ್ಲ. ಸಿದ್ದೇಶ್ವರ ಅವರಿಗೆ ನೀಡಿದ್ದ ಸಚಿವ ಸ್ಥಾನವನ್ನ ಕಿತ್ತುಕೊಂಡಿದ್ದಾರೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ. ಚುನಾವಣೆ ಬಳಿಕ ಬಿಜೆಪಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಿದೆ ಎಂದು ಹೇಳಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

M.B.Patil lingayat ಮೂಲೆಗುಂಪು ಸಮೀಕ್ಷೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ