ವಾಣಿಜ್ಯ, ಕಲಾ, ವಿಜ್ಞಾನ: ವಿದ್ಯಾರ್ಥಿನಿಯರೇ ಟಾಪರ್

Puc result: science, arts, commerce toppers

30-04-2018

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮೂರು ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕಲಾವಿಭಾಗದಲ್ಲಿ ಇಬ್ಬರು, ವಾಣಿಜ್ಯ ವಿಭಾಗದಲ್ಲಿ ಇಬ್ಬರು ಹಾಗೂ ವಿಜ್ಞಾನ ವಿಭಾಗದಲ್ಲಿ ಒಬ್ಬರು ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಬಳ್ಳಾರಿ ಕೊಟ್ಟೂರಿನ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೊದಲ ಮೂರು ಸ್ಥಾನಗಳನ್ನು ಪಡೆದಿರುವುದು ವಿಶೇಷ. ಸ್ವಾತಿ ಎಸ್ 595 ಅಂಕ, ರಮೇಶ್ 593 ಅಂಕ, ಕಾವ್ಯಂಜಲಿ ಗೊರವರ 588 ಅಕಗಳನ್ನು ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು ಟಾಪರ್ ಆಗಿದ್ದಾರೆ. ಮಲ್ಲೇಶ್ವರಂ ವಿದ್ಯಾಮಂದಿರ ಕಾಲೇಜಿನ ವರ್ಷಿಣಿ ಎಂ.ಭಟ್ ಮತ್ತು ರಾಜಾಜಿನಗರ ಎಎಸ್‍ಸಿ ಪಿಯು ಕಾಲೇಜಿನ ಅಮೃತಾ ಎಸ್‍ಆರ್ 595 ಅಂಕಗಳನ್ನು ಗಳಿಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ಪೂರ್ವಿಕಾ 594 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಬಸವೇಶ್ವರ ನಗರದ ವಿವಿಎಸ್ ಸರ್ದಾರ್ ಪಟೇಲ್ ಕಾಲೇಜಿನ ಕೃತಿ ಮುಟ್ಟಗಿ 597 ಅಂಕಗಳಿಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹಾಸನದ ಮಾಸ್ಟರ್ಸ್ ಪಿಯು ಕಾಲೇಜಿನ ಮೋಹನ್ ಎಸ್‍ಎಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಗೋವಿಂದದಾಸ ಪಿಯು ಕಾಲೇಜಿನ ಅಂಕಿತಾ ಪಿ 595 ಅಂಕಗಳಿಸುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

science commerce ಪ್ರಥಮ ಮೌಂಟ್ ಕಾರ್ಮೆಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ