ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Complaint to Election Commission Against Eshwarappa

30-04-2018

ಬೆಂಗಳೂರು: ಮಾಜಿ ಡಿಸಿಎಂ ಬಿಜೆಪಿ ನಾಯಕ ಕೆ‌.ಎಸ್.ಈಶ್ವರಪ್ಪ ವಿರುದ್ಧ ಕೆಪಿಸಿಸಿ ಕಾನೂನು ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕೆಪಿಸಿಸಿ ಕಾರ್ಯದರ್ಶಿ ಸೂರ್ಯ ಮುಕುಂದ್ ರಾಜ್, ಹಿಂದುತ್ವ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಕೆ.ಎಸ್.ಈಶ್ವರಪ್ಪ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. ಹಿಂದೂ ಧರ್ಮದ ಆಧಾರದ ಮೇಲೆ ಪ್ರತ್ಯೇಕವಾಗಿ ಮತ ಕೇಳಬಾರದು ಎಂದು ಸಂವಿಧಾನದಲ್ಲಿ ಹೇಳಿದೆ. ಆದರೂ, ಕೆ.ಎಸ್‌.ಈಶ್ವರಪ್ಪ ಹಿಂದು ಧರ್ಮದ ಮೇಲೆ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ, ಎಂದು ಚುನಾವಣಾ ಆಯೋಗಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ. ಹೀಗಾಗಿ, ಈಶ್ವರಪ್ಪ ಹೆಸರು ಮತದಾರರ ಪಟ್ಟಿಯಿಂದ ತೆಗಯುವಂತೆ ಕಾಂಗ್ರೆಸ್ ದೂರಿನಲ್ಲಿ ಮನವಿ ಮಾಡಿದೆ.


ಸಂಬಂಧಿತ ಟ್ಯಾಗ್ಗಳು

K.S.Eshwarappa Election Commission ಡಿಸಿಎಂ ಕೆಪಿಸಿಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ