ಬಿಜೆಪಿ ವಿರುದ್ಧ ವೀರಭದ್ರಪ್ಪ ಅಸಮಾಧಾನ

Veerabhadrappa is upset against BJP!

02-05-2018

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ವೀರಭದ್ರಪ್ಪ ಹಾಲಹರವಿ, ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ನಾಯಕರ ವಿರುದ್ಧ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಎದುರೇ ಅಸಮಾಧಾನ ಹೊರಹಾಕಿದ್ದಾರೆ. ಸಂಸದ ಜೋಶಿ ಹಾಗೂ ಇತರ ನಾಯಕರ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದಾರೆ. ನಮ್ಮ ಸಮಾಜದ ಶಕ್ತಿ ಏನು ಎನ್ನುವುದನ್ನು ಲೋಕಸಭಾ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿಯವರಿಗೆ ತೋರಿಸುತ್ತೇವೆ ಎಂದು ಆಕ್ರೋಶಗೊಂಡಿದ್ದಾರೆ.

ಹುಬ್ಬಳ್ಳಿಯ ಇಂದಿರಾ ನಗರದಲ್ಲಿ ನಡೆದ ಬಿಜೆಪಿ ಪ್ರಚಾರ ಸಂದರ್ಭದಲ್ಲಿ‌ ಅಸಮಾಧಾನ ತೋಡಿಕೊಂಡ ಹಾಲಹರವಿ. ಗೋವಿಂದ ಕಾರಜೋಳ ನಮ್ಮ ಸಮಾಜಕ್ಕೆ ಏನೂ ಮಾಡಿಲ್ಲ ಎನ್ನುತ್ತಿದ್ದಂತೆ, ಈ ಸಮಯದಲ್ಲಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯೂ ನಡೆದು ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದರು.

'ನಾನೇನು ಭ್ರಷ್ಟಾಚಾರ ಮಾಡಿರಲಿಲ್ಲ, ನನ್ನ ವಿರುದ್ಧ ಯಾವುದೇ ದಲಿತ ದೌರ್ಜನ್ಯ ಪ್ರಕರಣಗಳಿಲ್ಲ. ಪಕ್ಷ ತಪ್ಪು ಹೆಜ್ಜೆ ಇಟ್ಟು, ಮಾದಿಗ ಸಮಾಜಕ್ಕೆ ಅನ್ಯಾಯ ಮಾಡಿದೆ'. ಎಡಗೈ ಸಮುದಾಯಕ್ಕೆ ಅನ್ಯಾಯ ಮಾಡಿದ ಶಾಪ ಕಾಂಗ್ರೆಸ್ ಗೆ ತಟ್ಟಿದೆ. ಬಿಜೆಪಿಗೂ ತಟ್ಟಲಿದೆ ಎಂದು ಅಸಮಧಾನ ಹೊರಹಾಕಿದ್ದಾರೆ ಹಾಲಹರವಿ.

 


ಸಂಬಂಧಿತ ಟ್ಯಾಗ್ಗಳು

ramesh jigajinagi Minister ಚಕಮಕಿ ಅಸಮಧಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ