ಕೆಆರ್ ಎಸ್ ನಲ್ಲಿ ಬಿರುಗಾಳಿ ಅವಾಂತರ

A traveler died at KRS

02-05-2018

ಮಂಡ್ಯ: ಪ್ರಸಿದ್ಧ ಕೆ.ಆರ್.ಎಸ್. ಬೃಂದಾವನದಲ್ಲಿ ಬಿರುಗಾಳಿ ಸಹಿತ ಮಳೆ ಅವಾಂತರ ಸೃಷ್ಟಿಸಿದೆ. ಬಿರುಗಾಳಿಗೆ ಸುಮಾರು 30ಕ್ಕೂ ಹೆಚ್ಚು ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಘಟನೆಯಲ್ಲಿ ಓರ್ವ ಪ್ರವಾಸಿಗ ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಉರುಳಿ ಬಿದ್ದ ಮರಗಳಡಿ ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಂಬ್ಯುಲೆನ್ಸ್, ಅಗ್ನಿ ಶಾಮಕ ವಾಹನಗಳು ತೆರಳಲಾಗದೆ ಗಾಯಾಳುಗಳ ಪರದಾಡುವಂತಾಗಿದೆ. ಸ್ಥಳೀಯರು ಹಾಗು ಇತರೆ ಪ್ರವಾಸಿಗರಿಂದ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಹರಸಾಹಸ ಪಟ್ಟು ಗಾಯಾಳುಗಳನ್ನು ಹೊರ ತಂದು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಿಂದ ಪ್ರವಾಸಿಗರು ಆತಂಕಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

KRS Ambulance ಶ್ರೀರಂಗಪಟ್ಟಣ ಬಿರುಗಾಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ