‘ಉತ್ತರ ಕರ್ನಾಟಕದಲ್ಲಿ ಉತ್ತಮ ಸ್ಪಂದನೆ’- ಸಿದ್ದರಾಮಯ್ಯ

siddaramaiah election campaign at uttara karnataka

02-05-2018

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಕರ್ನಾಟಕ ಭಾಗದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ಸಿಗುತ್ತಿದೆ. ನಮ್ಮ ಯೋಜನೆಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ, ಡಿ.ಕೆ.ಶಿವಕುಮಾರ್ ರಾಜ್ಯಾದ್ಯಂತ ಪ್ರಚಾರ ಮಾಡುತ್ತಿದ್ದಾರೆ. ನಾನು ಈ ಭಾಗದಲ್ಲಿ ಪ್ರಚಾರ ಮಾಡುತ್ತಿದ್ದೇನೆ. ನಾವೆಲ್ಲ ಒಟ್ಟಾಗಿ ಇದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ. ಸಂತೋಷ್, ಅನಂತ ಕುಮಾರ್, ಶೆಟ್ಟರ್, ಈಶ್ವರಪ್ಪ ಸೇರಿ ಟಿಕೆಟ್ ತಪ್ಪಿಸಿದ್ದಾರೆ. ವಿಜಯೇಂದ್ರ ವರುಣಾರಲ್ಲಿ ಮನೆ ಮಾಡಿ, ಒಂದು ತಿಂಗಳು ಕಾಲ ಪ್ರಚಾರ ಮಾಡಿದ್ದರು. ಅಪ್ಪ ಮತ್ತು ಹೈಕಮಾಂಡ್ ಹೇಳಿ ಚುನಾವಣೆಗೆ ತಯಾರಿ ಮಾಡಿದ್ದರು.

ಯಡಿಯೂರಪ್ಪ ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದರೆ ವಿಜಯೇಂದ್ರಗೆ ಟಿಕೆಟ್ ತಪ್ಪುತ್ತಿರಲಿಲ್ಲ. ಶೋಭಾಗೆ ಟಿಕೆಟ್ ಕೊಡಿಸಲು ಯಡಿಯೂರಪ್ಪಗೆ ಸಾಧ್ಯವಾಗಿಲ್ಲ ಎಂದು ಸಿದ್ದರಾಮಯ್ಯ ಗೇಲಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರಿಗೆ ವೃದ್ಧಾಶ್ರಮಕ್ಕೆ ಹೋಗಲು ಹೇಳಿದ್ದರು. ಈಗ ರಾಜಕೀಯ ಕಾರಣಕ್ಕೆ ದೇವೇಗೌಡರ ಬಗ್ಗೆ ಹೊಗಳುತ್ತಿದ್ದಾರೆ. ಇದೆಲ್ಲ ನೋಡಿದರೆ ಜೆಡಿಎಸ್, ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿ ಕಾಣುತ್ತೆ. ಬಿಜೆಪಿ ಮತ್ತು ಕಾಂಗ್ರೆಸ್‌ ನವರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಲ್ಲ. ನಾನು ಜೆಡಿಎಸ್ ವಿರುದ್ಧ ಟೀಕೆ ಮಾಡುತ್ತೇನೆ. ಮೈಸೂರು ಭಾಗದಲ್ಲಿ ಓನ್ಲಿ ಜೆಡಿಎಸ್ ಮೇಲೆ ಅಟ್ಯಾಕ್ ಮಾಡುತ್ತೇನೆ ಎಂದು ತಿಳಿಸಿದರು.

 


ಸಂಬಂಧಿತ ಟ್ಯಾಗ್ಗಳು

siddaramaiah H.D.Deve Gowda ಅನಂತ ಕುಮಾರ್ ಈಶ್ವರಪ್ಪ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ