ಕಾಂಗ್ರೆಸ್ ಬೆಂಬಲಿಗನೊಬ್ಬನ ಅನುಮಾನಾಸ್ಪದ ಸಾವು!

Suspicious death of a Congress supporter at Chikkaballapur

02-05-2018

ಬೆಂಗಳೂರು: ಚಿಕ್ಕಬಳ್ಳಾಪುರ ತಾಲ್ಲೂಕು ಕೊಳವನಹಳ್ಳಿಯಲ್ಲಿ ಕಾಂಗ್ರೆಸ್ ಬೆಂಬಲಿಗರೊಬ್ಬರು ನೇಣು ಬಿಗಿದುಕೊಂಡು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದ್ದು ಪ್ರಕರಣವು ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಳವನಹಳ್ಳಿಯ ಜಗದೀಶ್ (26) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಜಗದೀಶ್ ಕುಡಿತದ ಚಟ ಅಂಟಿಸಿಕೊಂಡಿದ್ದು, ಈತನ ಕಾಟ ತಾಳಲಾರದೇ ಪತ್ನಿ ತವರು ಮನೆಗೆ ಹೋಗಿದ್ದರು ಇದರಿಂದ  ಮನನೊಂದು ಒಂಟಿಯಾಗಿದ್ದ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆದರೆ ಸ್ಥಳೀಯ ಕೆಲ ಮುಖಂಡರು ಕಾಂಗ್ರೆಸ್ ಬೆಂಬಲಿಸುತ್ತಿದ್ದ ಜಗದೀಶ್‍ಗೆ ಜೆಡಿಎಸ್ ಗೆ ಮತ ನೀಡುವಂತೆ 500 ರೂಪಾಯಿ ಹಣ ನೀಡಿ ಗ್ರಾಮದ ಮುನೇಶ್ವರ ದೇವಾಲಯದಲ್ಲಿ ಪ್ರಮಾಣ ಮಾಡಿಸಿಕೊಂಡಿದ್ದರಂತೆ ಇದರಿಂದಾಗಿ ಮನನೊಂದ ಅವರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಮೃತ ಜಗದೀಶ್ ಕುಟುಂಬಸ್ಥರು ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ನಂದಿಗಿರಿಧಾಮ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

congress worker Suicide ಪ್ರಕರಣ ತನಿಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ