ಬೆಂಗಳೂರಲ್ಲಿ ಎರಡು ದಿನ ನಿಷೇಧಾಜ್ಞೆ

election: 2 days prohibition at bengaluru

03-05-2018

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇದೇ 12ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮೇ 10ರ ಸಂಜೆ 5 ಗಂಟೆಯಿಂದ ಮೇ 12ರ ಮಧ್ಯರಾತ್ರಿಯವರೆಗೂ ಹಾಗೂ ಮತಎಣಿಕೆ ದಿನವಾದ ಇದೇ 15ರಂದು ಬೆಳಗ್ಗೆ 6 ಗಂಟೆಯಿಂದ ಅಂದು ಮಧ್ಯರಾತ್ರಿಯವರೆಗೂ 144ನೇ ಸೆಕ್ಷನ್‍ನಂತೆ ನಿಷೇಧಾಜ್ಞೆಯನ್ನು ನಗರ ಆಯುಕ್ತರು ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಮದ್ಯ ಹಾಗೂ ಇತರ ಮಾದಕ ವಸ್ತುಗಳ ಮಾರಾಟ, ಸೇವನೆ, ಸಂಗ್ರಹದ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಸಂಬಂಧಿತ ಟ್ಯಾಗ್ಗಳು

prohibition election ಆಯುಕ್ತ ಮಾದಕ ವಸ್ತು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ