ನಮಗೇ ನೀರಿಲ್ಲ, ನಾವೆಲ್ಲಿಂದ ಕಾವೇರಿ ನೀರು ಕೊಡೋದು -ಸಿಎಂ

cm siddaramaiah reaction on supreme court orders on cauvery issue

03-05-2018

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆ.ಆರ್.ಎಸ್ ಅಣೆಕಟ್ಟೆಯಲ್ಲಿ ನಮ್ಮ ಅಗತ್ಯಕ್ಕೆ ಬೇಕಾಗುವಷ್ಟೂ ನೀರಿಲ್ಲ. ಇನ್ನೂ ನಾವೆಲ್ಲಿಂದ ನೀರು ಕೊಡುವುದು ಎಂದು ಹೇಳಿದ್ದಾರೆ.

ಕಾವೇರಿ ನದಿಯಿಂದ ನಾಲ್ಕು ಟಿಎಂಸಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ, ನಾಲ್ಕು ಟಿಎಂಸಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಬಗ್ಗೆ ನನಗೇನೂ ಗೊತ್ತಿಲ್ಲ. ನಮ್ಮಲ್ಲೇ ನೀರಿಲ್ಲ, ನಾವೆಲ್ಲಿಂದ ಕೊಡೋದು ಎಂದರು.

ಕಾವೇರಿ ನದಿಯಿಂದ ನೀರು ಬಿಡುವ ಸಂಬಂಧ ವಕೀಲರೊಂದಿಗೆ ಚರ್ಚಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮೊದಲು ಕನ್ನಡ ಕಲಿಯಲಿ. ಅವರಿಗೆ ಇಷ್ಟು ವರ್ಷ ಆದರೂ ಕನ್ನಡ ಮಾತಾಡೋಕೆ ಬರೋದಿಲ್ಲ. ಅವರು ಒಂದು ಒಂಥರ ಹುಂಬ ಇದ್ದಂತೆ. ಶ್ರೀರಾಮುಲು ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಜೆಡಿಎಸ್ ವರಿಷ್ಠ ದೇವೇಗೌಡರನ್ನು ವೃದ್ಧಾಶ್ರಮಕ್ಕೆ ಸೇರಿಸಬೇಕು ಅಂತ ಹೇಳಿದ್ದು ಪ್ರಧಾನಿ ನರೇಂದ್ರ ಮೋದಿ, ಈಗ ಅದೇ ಮೋದಿ ಗೌಡರನ್ನು ಹೊಗಳುತ್ತಿದ್ದಾರೆ. ನರೇಂದ್ರ ಮೋದಿ ಅವರ ಬಿಜೆಪಿ ರಾಜ್ಯದಲ್ಲಿ ಜೆಡಿಎಸ್ ಜೊತೆ ಒಪ್ಪಂದ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.


ಸಂಬಂಧಿತ ಟ್ಯಾಗ್ಗಳು

siddaramaiah supreme court ಕನ್ನಡ ಶ್ರೀರಾಮುಲು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ