ದಕ್ಷಿಣ ಭಾರತದಲ್ಲಿ ಕೋಮುವಾದಕ್ಕೆ ಬೆಲೆ ಕೊಡುವುದಿಲ್ಲ -ಮೊಯ್ಲಿ

veerappa moily criticized central government

03-05-2018

ಚಿಕ್ಕಬಳ್ಳಾಪುರ: ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಂಸದ ವೀರಪ್ಪ ಮೊಯ್ಲಿ, ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಅಮಿತ್ ಷಾ ಅವರೇ ಹೇಳಿದ್ದಾರೆ ಎಂದು, ಕಳೆದ ಕೆಲ ದಿನಗಳ ಹಿಂದೆ ಸುದ್ದಿಗೋಷ್ಟಿಯಲ್ಲಿ ನಡೆದಿದ್ದನ್ನು ಜ್ಞಾಪಿಸಿದರು. ಹೆಚ್.ಎ.ಎಲ್ ಖಾಸಗಿ ವ್ಯಕ್ತಿಗೆ ಕೊಡುವ ಮೂಲಕ ಕನ್ನಡಿಗರ ಉದ್ಯೋಗ ಕಿತ್ತುಕೊಂಡರು ಎಂದು ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ವೀರಪ್ಪ ಮೊಯ್ಲಿ, ದಕ್ಷಿಣ ಭಾರತದ ನೆಲ ಕೋಮುವಾದಕ್ಕೆ ಬೆಲೆ ಕೊಡುವುದಿಲ್ಲ. ಬಜೆಟ್ ನಲ್ಲಿ ಎತ್ತಿನ ಹೊಳೆ ಯೋಜನೆಗೆ ಹಣ ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ. ಒಂದು ವರ್ಷದೊಳಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ಬರಲಿದೆ ಎಂದರು. ಬೆಂಗಳೂರು ತ್ಯಾಜ್ಯ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸಿ ಕೆರೆಗಳಿಗೆ ನೀರು ತುಂಬಿಸುವ ಹೆಚ್.ಎನ್.ವ್ಯಾಲಿ ಯೋಜನೆಗೆ ಚಾಲನೆ ಕೊಡಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಐದು ವರ್ಷಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಾಗಿವೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ