ಅತ್ಯಾಚಾರ: ಆರೋಪಿಗೆ 10ವರ್ಷ ಕಠಿಣ ಜೈಲು ಶಿಕ್ಷೆ

Rape: rigorous imprisonment for 10years

03-05-2018

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ನಗರದ ಸಿಸಿಹೆಚ್ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂಗಳ ದಂಡ ವಿಧಿಸಿದೆ. ರಾಜಗೋಪಾಲ ನಗರದ ಕೇಶವ ಅಲಿಯಾಸ್ ಕಾಕಾ (35) ಕಳೆದ 2014ರ ಏ. 3 ರಂದು 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ, ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 51ನೇ ಸಿಸಿಹೆಚ್ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಪರಿಗಣಿಸಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಹಿರೇಮಣಿ ಅಭಿಯೋಗ ಅವರು ವಾದ ಮಂಡಿಸಿದ್ದರು.


ಸಂಬಂಧಿತ ಟ್ಯಾಗ್ಗಳು

Rape court ಸರ್ಕಾರಿ ಕಠಿಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ