ಬಿಜೆಪಿ ಶಾಸಕ ವಿಜಯ್ ಕುಮಾರ್ ನಿಧನ

04-05-2018
ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವಿಜಯ್ ಕುಮಾರ್(60) ನಿಧನರಾಗಿದ್ದಾರೆ. ಹಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್, ಜಯನಗರ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿದ್ದರು. ನಿನ್ನೆ ಚುನಾವಣೆ ಪ್ರಚಾರ ವೇಳೆ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ಕರೆತಂದಾಗಲೇ ಹೃದಯ ಬಡಿತ, ಬಿಪಿ ಕುಸಿತ ಕಂಡಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಜಯ್ ಕುಮಾರ್ ವಿಧಿ ವಶರಾದರು.
ಒಂದು ಕಮೆಂಟನ್ನು ಹಾಕಿ