ಹಾವೇರಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

Congress massive convention in Haveri

04-05-2018

ಹಾವೇರಿ: ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾವೇರಿಯಲ್ಲಿ ಚುನಾವಣಾ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಇಂದು ಸಂಜೆ ಹಾವೇರಿಯ ಶಿಗ್ಗಾಂವಿಗೆ ಆಗಮಿಸಲಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಕಾರ್ಯಕರ್ತರ ಬೃಹತ್‌  ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಸಮಾವೇಶಕ್ಕೆ ಸುಮಾರು ಮೂವತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸೇರುವ ನೀರಿಕ್ಷೆ ಇಟ್ಟುಕೊಂಡಿದ್ದಾರೆ. ರಾಹುಲ್ ಗಾಂಧಿ ಆಗಮನ ಹಿನ್ನೆಲೆ ಶಿಗ್ಗಾಂವಿಯಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಪೊಲೀಸರು ಹಾಗೂ ಮಿಲಿಟರಿ ಪಡೆಯಿಂದ ಬಿಗಿ ಭದ್ರತೆ ಕೈಗೊಂಡಿದ್ದಾರೆ. ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ, ಕೆಪಿಸಿಸಿ ಅದ್ಯಕ್ಷ ಜಿ.ಪರಮೇಶ್ವರ, ಸಿಎಂ ಇಬ್ರಾಹಿಂ, ಸಾಥ್ ನೀಡಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

AICC Rahul Gandhi ಮಿಲಿಟರಿ ವೇಣುಗೋಪಾಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ